8 ಲಕ್ಷ ಮೌಲ್ಯದ ಅಕ್ಕಿ ವಶ
ಹಾವೇರಿ: ಪಡಿತರ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸಂದರ್ಭ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಟೋಲ್ ಹತ್ತಿರ ಆಹಾರ ನಿರೀಕ್ಷಕರು ಮತ್ತು ಪೊಲೀಸರು ಶುಕ್ರವಾರ ದಾಳಿ ನಡೆಸಿ, 238 ಕ್ವಿಂಟಲ್ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ 12.30ರ ವೇಳೆಯಲ್ಲಿ ಹುಬ್ಬಳ್ಳಿಯಿಂದ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ಬೆಂಗಳೂರು ಕಡೆ ಅಕ್ಕಿಯನ್ನು ಸಾಗಿಸುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ₹8.11 ಲಕ್ಷ ಮೌಲ್ಯದ 478 ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ.