ಹುಬ್ಬಳ್ಳಿ; ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ತಂದು ಪೊಲೀಸರಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಡಾಲರ್ಸ್ ಕಾಲೋನಿಯ ಹೊಟೇಲ್ ನಲ್ಲಿ ನಡೆದ ಜೆಡಿಎಸ್ ಕೋರ ಕಮಿಟಿ ಸಭೆಯಲ್ಲಿ ಭಾಗವಹಿಸಿ ಹೊರಟಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಇಬ್ಬರ ಮಧ್ಯೆ ತಳ್ಳಾಟ- ನೂಕಾಟ ನಡೆಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಗಲಾಟೆಯಲ್ಲಿ ಕೈ ನಾಯಕನ ಕಾರಿಗೆ ಹಾನಿಯಾಗಿದೆ.ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಅಮಾನತ್ತು ಮಾಡಲಾಗಿದೆ ಎಂದು ಕುಮಾರಸ್ವಾಮಿ ಘೋಷಿಸಿದರು.