ಉದ್ಯಾನ ನಗರಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಮಳೆಗೆ ಜನ ಹೈರಾಣಾಗಿದ್ದಾರೆ. ಧಾರಾಕಾರ ಮಳೆ ಹಲವು ಗಂಟೆಗಳ ಕಾಲ ಮುಂದುವರಿದು ರಾತ್ರಿಯವರೆಗೂ ಸುರಿಯಿತು. ಗುಡುಗು ಮತ್ತು ಆಲಿಕಲ್ಲು ಸಹಿತ ಮಳೆಗೆ ನಗರದ ಮಂದಿ ಹೈರಾಣವಾಗಿದ್ದಾರೆ. ನಗರದ ಹಲವಾರು ಭಾಗಗಳಲ್ಲಿ ರಸ್ತೆಗಳು ಜಲಾವೃತಗೊಂಡು ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಗಿದ್ದರಿಂದ ಸಂಚಾರ ದಟ್ಟಣೆ ವರದಿಯಾಗಿದೆ. ನಗದಲ್ಲಿ ವರುಣ ತಂದ ಅವಾಂತರಗಳನ್ನು ಜನರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.