ಗ್ರಾಪಂಗಳಲ್ಲಿ ಅವಿಶ್ವಾಸ ಮಂಡನೆಗೆ ಕಾಲಮಿತಿ
ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆ, ಮರಣ ಮತ್ತು ಅನರ್ಹತೆಯಿಂದ ತೆರವಾದ ಸ್ಥಾನಕ್ಕೆ ಆಯ್ಕೆಯಾದವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕನಿಷ್ಠ 15 ತಿಂಗಳ ಅವಧಿ ಪೂರ್ಣವಾಗಿರಬೇಕೆಂದು ಹೈಕೋರ್ಟ್ ವಿಭಾಗೀಯ ಪೀಠ ತಿಳಿಸಿದೆ.
ಅವಿಶ್ವಾಸ ಮಂಡಿಸಲು 15 ತಿಂಗಳು ಪೂರ್ಣವಾಗಬೇಕಾದ ಅವಶ್ಯಕತೆ ಇಲ್ಲ ಎಂದು ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಯಲಹಂಕ ತಾಲೂಕಿನ ಬಾಗಲೂರು ಗ್ರಾಪಂ ಅಧ್ಯಕ್ಷೆಯಾಗಿದ್ದ ಪ್ರೀತಿ ಮುನೇಗೌಡ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ .ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಪಂಚಾಯತ್ ರಾಜ್ನಂತಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಿಶ್ವಾಸವೆಂಬ ಅಸ್ತ್ರವು ಅಪಾಯಕಾರಿಯಾಗಿರಲಿದೆ. ಅನೈತಿಕ ರಾಜಕೀಯ ಹಿತಾಸಕ್ತಿ ಈಡೇರಿಸುವುದು ಮತ್ತು ಕ್ಷುಲ್ಲಕ ಕಾರಣಗಳಿಂದ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುವ ಪ್ರವೃತ್ತಿ ನಿಯಂತ್ರಿಸುವುದು ಪಂಚಾಯತ್ ರಾಜ್ ಕಾಯ್ದೆ ಸೆಕ್ಷನ್ 49(2)ರ ಮೂಲ ಉದ್ದೇಶವಾಗಿದೆ. ಹೀಗಾಗಿ 15 ತಿಂಗಳು ಅವಿಶ್ವಾಸ ನಿರ್ಣಯಕ್ಕೆ ಅವಕಾಶವಿರುವುದಿಲ್ಲ ಎಂದು ಪೀಠ ತಿಳಿಸಿದೆ. ಪ್ರಕರಣದ ಹಿನ್ನೆಲೆ?: ಅರ್ಜಿದಾರರು 2021ರ ಡಿ.27ರಂದು ಬಾಗಲೂರು ಗ್ರಾಪಂ ಸದಸ್ಯರಾಗಿದ್ದರು. 2022ರ ಜ.18ರಂದು ಹಮೀದಾ ಎಂಬುವರು ಅಧ್ಯಕ್ಷರಾಗಿ, 2023ರ ಫೆ.1ರಂದು ರಾಜೀನಾಮೆ ಸಲ್ಲಿಸಿದ್ದರು. ತೆರವಾದ ಸ್ಥಾನಕ್ಕೆ 2023ರ ಮಾ.7ರಂದು ಚುನಾವಣೆ ನಡೆದು ಪ್ರೀತಿ ಮುನೇಗೌಡ ಅಧ್ಯಕ್ಷರಾದರು. 2023ರ ಅ.10ರಂದು ಪ್ರೀತಿ ಮುನೇಗೌಡರ ವಿರುದ್ಧ ಇತರ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಇದನ್ನು ಪ್ರಶ್ನಿಸಿ ಪ್ರೀತಿ ಮುನೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.