ಬೆಂಗಳೂರು; ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಭಾರೀ ಹಣಕಾಸಿನ ಅವ್ಯವಹಾರ ನಡೆದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಇಂಥ ಹಗರಣ ನಡೆಯದಂತೆ ತಡೆಯಲು ಮಹತ್ವದ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ವಿವಿಧ ನಿಗಮ ಮಂಡಳಿಗಳಿಗೆ ಈಗಾಗಲೇ ಬಿಡುಗಡೆ ಮಾಡಿರುವ 2250 ಕೋಟಿ ರು. ಹಣ ಹಿಂಪಡೆದು, ಹಣ ಬಳಕೆ ಸಂಬಂಧ ಹೊಸ ಮಾರ್ಗಸೂಚಿ ರೂಪಿಸಿದ ಬಳಿಕ ಮರಳಿ ಹಣ ಬಿಡುಗಡೆ ಮಾಡಲು ನಿರ್ಧರಿಸಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾ ತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ವಾಲ್ಮೀಕಿ ನಿಗಮದ ಹಗರಣದಲ್ಲಿ ನಿಗಮದ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ವ್ಯವಸ್ಥಿತವಾಗಿ ಹಣ ದುರ್ಬಳಕೆ ಮಾಡಿ ಕೊಂಡಿರುವುದು ಪತ್ತೆಯಾಗಿದೆ. ಉಳಿದ ನಿಗಮ-ಮಂಡಳಿಗಳಲ್ಲಿ ಈ ರೀತಿ ಆಗದಂತೆ ಖಜಾನೆಯಿಂದಲೇ ನೇರವಾಗಿ ಹಣ ಬಿಡುಗಡೆ ಮಾಡಲು ಸ್ಪಷ್ಟ ಮಾರ್ಗಸೂಚಿ ರೂಪಿಸಲಾ ಗುವುದು’ ಎಂದು ಹೇಳಿದರು.