ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್
ಪಕ್ಷದ ಸರ್ಕಾರವು ಐದು ಗ್ಯಾರೆಂಟಿಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಬೇರೆ ಏನೂ ಮಾಡುತ್ತಿಲ್ಲ, ಎಲ್ಲವನ್ನು ರಾಜ್ಯದ ಜನರು ನೋಡುತ್ತಿದ್ದಾರೆ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನ ಭದ್ರಗೊಳಿಸಲು ಹಗಲಿರುಳು ಸರ್ಕಸ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಯುವ ಧುರೀಣ, ವಿಎಕೆ ಫೌಂಡೇಶನ್ ಅಧ್ಯಕ್ಷ ವೆಂಕಟೇಶ ಕಾಟವೆ ಹೇಳಿದ್ದಾರೆ.
ಪ್ರಕಟಣೆಯಲ್ಲಿ ಅವರು, ಮುಖ್ಯಮಂತ್ರಿ ರೇಸ್ನಲ್ಲಿ ಹಲವರ ಹೆಸರು ಕೇಳಿ ಬರುತ್ತಿವೆ, ರಾಜ್ಯದಲ್ಲಿ ಜನಪರ ಕಾರ್ಯ ಆಗುತ್ತಿಲ್ಲ ಹಾಗಾಗಿ ಜನರು ಮತ್ತೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ತರಬೇಕೆಂದು ಬಯಸಿದ್ದಾರೆ .ಶಿಗ್ಗಾಂವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುತ್ತದೆ ಅದರಲ್ಲಿ ಎರಡು ಮಾತಿಲ್ಲ ಎಂದು ವೆಂಕಟೇಶ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.