ಬಾಲಕನ ಹೊತ್ತೊಯ್ದ ಮೊಸಳೆ
ರಾಯಚೂರು : ಸಮೀಪದ ಗಂಜಳ್ಳಿ ಗ್ರಾಮದಲ್ಲಿ ಶುಕ್ರವಾರ ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದಿದೆ.
ರಾಯಚೂರು ತಾಲ್ಲೂಕಿನ ಗಂಜಳ್ಳಿ ಗ್ರಾಮದ ಜಯಪ್ಪ ಅವರ ಮಗ ವಿಶ್ವ (12) ಕುರಿಗಳನ್ನು ಮೇಯಿಸಲು ಹೋಗಿದ್ದಾಗ ಅವುಗಳಿಗೆ ನೀರು ಕುಡಿಸಲು ಕೃಷ್ಣಾ ನದಿಗೆ ಇಳಿದಾಗ ಮೊಸಳೆ ದಾಳಿ ಮಾಡಿ ಬಾಲಕನನ್ನು ಎಳೆದೊಯ್ದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿಯನ್ನು ಕರೆಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಬಾಲಕ ಇನ್ನೂ ಪತ್ತೆಯಾಗಿಲ್ಲ.