ಪ್ರೀತಿ ನೆಪದಲ್ಲಿ ಅಪ್ರಾಪ್ತ ಹಿಂದೂ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡ ಬಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದೂ ಪರ ಸಂಘಟನೆಯವರು ಹಿಡಿದು ಧರ್ಮದೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳದಿಂದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ ಯುವಕ ಹುಬ್ಬಳ್ಳಿ ಕರೆದುಕೊಂಡು ಬಂದಿದ್ದನು. ಹುಬ್ಬಳ್ಳಿ ಗಬ್ಬೂರಿನ ಹೋಟೆಲ್ಲೊಂದರಲ್ಲಿ ಬಾಲಕಿಯೊಂದಿಗೆ ಅನುಮಾನಾಸ್ಪದವಾಗಿ ಓಡಾಡುವುದು ಗಮನಿಸಿದ್ದ ಹಿಂದೂಪರ ಸಂಘಟನೆಯ ಕಾರ್ಯಕರ್ತರು. ಜೋಡಿಯನ್ನ ಹಿಡಿದು ವಿಚಾರಿಸಿದಾಗ ಬೆಳಕಿಗೆ ಬಂದಿದೆ.
ಇದೇ ವೇಳೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಬಗ್ಗೆ ಕೇಸ್ ದಾಖಲಾಗಿದ್ದು ಗೊತ್ತಾಗಿದೆ. ಹಿಂದೂ ಜಾಗರಣಾ ವೇದಿಕೆ ಮುಖಂಡರು ಜೋಡಿಗೆ ಧರ್ಮದೇಟು ನೀಡಿ ಬೇಂಡಿಗೇರಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.