ದೇವರನಾಡಿನಲ್ಲಿ ಅಲ್ಲೋಲ ಕಲ್ಲೋಲ; ೬೭ ಮಂದಿ ಮೃತಪಟ್ಟಿರುವ ಶಂಕೆ
ಕೇರಳ: ದೇವರ ನಾಡು ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಮೂರು ಭೀಕರ ಭೂಕುಸಿತ ಉಂಟಾಗಿದ್ದು, ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿ ೬೭ ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಇನ್ನೂ ಹಲವು ಮಂದಿ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಸಾವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸುಮಾರು ೪೦೦ ಕುಟುಂಬಗಳು ತೊಂದರೆಗೊಳಗಾಗಿದ್ದು, ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿವೆ.
ಮೆಪ್ಪಾಡಿ ಸಮೀಪದ ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ ೧ ಗಂಟೆಯ ಸುಮಾರಿಗೆ ಮೊದಲ ಭೂಕುಸಿತ ಸಂಭವಿಸಿದೆ. ನಂತರ ಬೆಳಗಿನ ಜಾವ ೪.೧೦ರ ಸುಮಾರಿಗೆ ಕಲ್ಪೆಟ್ಟಾದಲ್ಲಿ ಭೂಕುಸಿತ ಸಂಭವಿಸಿತು. ಪರಿಣಾಮ, ಹಲವು ಕುಟುಂಬಗಳು ಕಣ್ಮರೆಯಾಗಿವೆ. ಅಲ್ಲದೇ, ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳನಲ್ಲೂ ಭೂಕುಸಿತವಾಗಿದೆ.