ಆತ್ಮಹತ್ಯೆ ಯತ್ನಿಸಿದ ಅಂಜಲಿ ಸಹೋದರಿ
ಹುಬ್ಬಳ್ಳಿ: ಇತ್ತೀಚೆಗೆ ಕೊಲೆಯಾದ ನಗರದ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಅವರ ಸಹೋದರಿ ಯಶೋಧಾ ಅಂಬಿಗೇರ (16) ಶನಿವಾರ ರಾತ್ರಿ ತಮ್ಮ ನಿವಾಸದಲ್ಲಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕುಟುಂಬಸ್ಥರು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ’ ಎಂದು ಬೆಂಡಿಗೇರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
‘ಯಶೋಧಾ ನಿತ್ರಾಣಗೊಂಡಿದ್ದರು. ಅವರನ್ನು ದಾಖಲಿಸಿಕೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಕಿಮ್ಸ್ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ ತಿಳಿಸಿದರು.