ಡಿವೈಡರ್‌ಗೆ ಕಾರು ಡಿಕ್ಕಿ: ಮಗು ಸಾವು
ಹುಬ್ಬಳ್ಳಿ: ಟೋಲ್ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್ ನಲ್ಲಿ ನಡೆದಿದೆ.
ಮೂರು ತಿಂಗಳ ಸಾನ್ವಿ ಮೃತಪಟ್ಟ ಮಗು. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಬಳಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡ ಟೋಲ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ ಗಳಾಗಿವೆ. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೂರು ತಿಂಗಳ ಮಗು ಸಾನ್ವಿ ಸಾವನ್ನಪ್ಪಿದೆ.