ಬೆಂಗಳೂರು: ಮುಡಾ ನಿವೇಶನ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಆರ್ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುವಂತೆ ದೂರುದಾರರಾದ ಟಿ.ಜೆ.ಅಬ್ರಹಾಂ ಹಾಗೂ ಸ್ನೇಹಮಯಿ ಕೃಷ್ಣಾ ಮತ್ತು ಪ್ರದೀಪ್ಗೆ ರಾಜಭವನದಿಂದ ಬುಲಾವ್ ನೀಡಲಾಗಿದೆ. ದೂರುದಾರರಿಗೆ ಪ್ರಾಸಿಕ್ಯೂಷನ್ ಪತ್ರವನ್ನು ನೀಡಲಾಗುತ್ತದೆ. ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಜುಲೈ 26ರಂದು ಟಿ.ಜೆ.ಅಬ್ರಹಾಂ ಅವರು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.