ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಕೇಸ್ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಬಳಿ ಭಾರತೀಯ ಜನತಾ ಪಾರ್ಟಿ ಹು- ಧಾ ಮಹಾನಗರ ಜಿಲ್ಲೆಯ ವತಿಯಿಂದ ಜರುಗಿದ ಬೃಹತ್ ಪ್ರತಿಭಟನೆಯಲ್ಲಿ ಸೆಂಟ್ರಲ್ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ವಿರೋಧ ಪಕ್ಷದ ಉಪನಾಯಕರಾದ ಪಶ್ಚಿಮ ಕ್ಷೇತ್ರದ ಶಾಸಕರಾದ ಅರವಿಂದ್ ಬೆಲ್ಲದ್ ಅವರೊಂದಿಗೆ ಭಾಗವಹಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ನೀತಿಯನ್ನು ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ ಮಜ್ಜಗಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್, ಸಂತೋಷ್ ಚವಾಣ,ಅನೂಪ್ ಬಿಜವಾಡಹಾಗೂ ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.