ಹುಬ್ಬಳ್ಳಿ: ಸೈಬರ್ ವಂಚಕರ ಜಾಲವನ್ನು ಪತ್ತೆ ಮಾಡಿರುವ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಮತ್ತು ಮುಂಬೈಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೊಬೈಲ್, ಲ್ಯಾಪ್ಟಾಪ್ ಸೇರಿ ಕೆಲ ದಾಖಲೆ ವಶಪಡಿಸಿಕೊಂಡು, ಕೆಲ ಬ್ಯಾಂಕ್ಗಳ ಖಾತೆಗಳನ್ನು ನಿಷ್ಕ್ರಿಯಗೊಳಿಸಿ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ.
ದೆಹಲಿಯ ನಿಖಿಲಕುಮಾರ್ ರೌನಿ ಮತ್ತು ಸಚಿನ್ ಬೋಲಾ ಹಾಗೂ ಮುಂಬೈಯ ನಿಗಮ್ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.