ಧಾರವಾಡ ಜಿಲ್ಲಾದ್ಯಂತ ವಿದ್ಯಾರ್ಥಿಗಳು ಡ್ರಗ್ಸ್ ಬಲಿಯಾಗುತ್ತಿರುವ ಅಂಶ ಬೆಳಕಿಗೆ ಬಂದಿದೆ. ಮುಂಬೈ, ದೆಹಲಿ, ಬೆಂಗಳೂರುಗಳಲ್ಲಿ ಕಾಣ ಸಿಗುತ್ತಿದ್ದ ಡ್ರಗ್ಸ್ ಪ್ರಕರಣಗಳು ಇದೀಗ ಹುಬ್ಬಳ್ಳಿ- ಧಾರವಾಡಕ್ಕೆ ಕಾಲಿಟ್ಟಿರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.
156 ಜನ ಡ್ರಗ್ಸ್ ಸೇವಿಸಿರುವುದನ್ನು ದೃಢಪಡಿಸಿರುವುದು ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸ್ ಆಯುಕ್ತಾಲಯ ಅದರಲ್ಲಿ 79 ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ ಎಂಬ ಆತಂಕಕಾರಿ ವಿಚಾರವನ್ನು ಹೊರ ಹಾಕಿದೆ.
ಈ ವಿದ್ಯಾರ್ಥಿಗಳು ವಾಣಿಜ್ಯ ನಗರಿಯ ವಿವಿಧ ಶಾಲಾ-ಕಾಲೇಜ್‌ನಲ್ಲಿ ಪದವಿ, ಡಿಪ್ಲೊಮಾ, ಎಂಬಿಬಿಎಸ್, ಬಿಟೆಕ್ ಸೇರಿ ವಿವಿಧ ಕೋರ್ಸ್ ಓದುತ್ತಿದ್ದಾರೆ. ಈ ಕುರಿತು ಸುದ್ದಿಗಾರ ರೊಂದಿಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಹಾನಿಂಗ ನಂದಗಾವಿ ಮಾಹಿತಿ ಹಂಚಿಕೊಂಡಿದ್ದಾರೆ.
ಹುಬ್ಬಳ್ಳಿಯ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಈ ಆತಂಕಕಾರಿ ಅಂಶದ ಬಗ್ಗೆ ಪಾಲಕರಿಗೆ ತಿಳಿಸಿದ್ದಾರೆ.
ಈಗಾಗಲೇ ಎರಡು ಬಾರಿ ಕಾರ್ಯಾಚರಣೆ ಮಾಡಲಾಗಿತ್ತು. ಇದು ಮೂರನೇ ವಿಶೇಷ ಕಾರ್ಯಾಚರಣೆ. 354 ವ್ಯಸನಿಗಳನ್ನು ವಶಕ್ಕೆ ಪಡೆದು ಕಿಮ್ಸ್ ಮತ್ತು ಡಿಮ್ಹಾನ್ಸ್ ನಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅವರಲ್ಲಿ 156 ಜನರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ವಿವಿಧ ಶಾಲಾ- ಕಾಲೇಜ್ ಗಳ 79 ವಿದ್ಯಾರ್ಥಿಗಳಿದ್ದು, 38 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಈ ಆತಂಕಕಾರಿ ವಿಚಾರ ಬಹಿರಂಗಪಡಿಸಿದ್ದಾರೆ.