ಹುಬ್ಬಳ್ಳಿ- ಪುಣೆ ವಂದೇ ಭಾರತ್ ರೈಲು 18ರಿಂದ
ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಪುಣೆಗೆ ಸೆ. 18 ರಿಂದ ವಂದೇ ಭಾರತ್ ( ರೈಲು ಸಂಚಾರ ಪ್ರಾರಂಭವಾಗಲಿದೆ.
ಈ ಕುರಿತು ಪ್ರಕಟಣೆ ನೀಡಿರುವ ಕೇಂದ್ರ ಸಚಿವ ಪಲ್ಲಾದ ಜೋಶಿ, ಸೆ. 16ರಂದು ವಂದೇ ಭಾರತ್ ರೈಲಿನ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಅಹ್ಮದಾಬಾದ್ನಿಂದ ವರ್ಚುವಲ್ ಸಮಾರಂಭದ ಮೂಲಕ ಉದ್ಘಾಟಿಸುವರು. ಹುಬ್ಬಳ್ಳಿಯಿಂದ ಸೆ. 18ರಂದು ಸಂಚಾರ ಆರಂಭವಾಗಲಿದ್ದು ವಾರದಲ್ಲಿ ಮೂರು ಬಾರಿ
ಬುಧವಾರ, ಶುಕ್ರವಾರ ಹಾಗೂ ಭಾನುವಾರ) ಹುಬ್ಬಳ್ಳಿಯಿಂದ ಮತ್ತು ಗುರುವಾರ, ಶನಿವಾರ, ಸೋಮವಾರದಂದು ಪುಣೆಯಿಂದ ಹುಬ್ಬಳ್ಳಿಗೆ ಎಕ್ಸ್ಪ್ರೆಸ್ ರೈಲು ಸಂಚರಿಸಲಿದೆ. ಇದು ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದ್ದು, ಕೊಲ್ಲಾಪುರ ಮುಖಾಂತರ ಸಂಚರಿಸುವುದಿಲ್ಲ ಎಂದು ಪಲ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆ ಗಮನಿಸಿ ಮುಂದಿನ ದಿನಗಳಲ್ಲಿ ಈ ರೈಲನ್ನು ಪ್ರತಿದಿನ ಓಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.