ಕರ್ನಾಟಕ ಸ್ಕೂಲ್ ಎಜುಕೇಷನ್ ಅಂಡ್ ಅಸೆಸ್ಮೆಂಟ್ ಬೋರ್ಡ್ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ರಿಸಲ್ಟ್ ಅನ್ನು ಯಾವಾಗ ಬಿಡುಗಡೆ ಮಾಡಲಿದೆ. ಎಂಬ ಅಧಿಕೃತ ದಿನಾಂಕ ಹೊರಬಿದ್ದಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳು ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಆ ದಿನಾಂಕವನ್ನು ಕೂಡ ಬೋರ್ಡ ಪ್ರಕಟಿಸಿದೆ. ಇಲ್ಲಿದೆ ನೋಡಿ ಸಂಪೂರ್ಣ ಡೀಟೇಲ್ಸ್.
ರಿಸಲ್ಟ್ ಯಾವಾಗ ?
ಯಾವ ವೆಬಸೈಟ್ ಚೆಕ್ ಮಾಡಬೇಕು?
ಫೇಲಾದರೆ ಮುಂದಿನ ದಾರಿ ಯಾವುದು?
ಎಲ್ಲದಕ್ಕೂ ಉತ್ತರ ಇಲ್ಲಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಎಸ್ ಎಸ್ ಎಲ್ ಸಿ ತನ್ನದೆಯಾದ ಮಹತ್ವವನ್ನು ಪಡೆದಿದೆ. ಎಸ್ ಎಸ್ ಎಲ್ ಸಿ ನಂತರ ನಾವು ಆಯ್ಕೆ ಮಾಡಿಕೊಳ್ಳುವ ಕೋರ್ಸ್ ನಮ್ಮ ಭವಿಷ್ಯವನ್ನು ರೂಪಿಸುತ್ತದೆ ಎಂಬ ಮಾತಿದೆ. ಈ ಘಟ್ಟವನ್ನು ಬಹುತೇಕರು ತಮ್ಮ ಯಶಸ್ಸಿನ ಮೆಟ್ಟಿಲಾಗಿಸಿಕೊಳ್ಳುತ್ತಾರೆ. ಅಂತಹ 2023-24ನೇ ಸಾಲಿನಲ್ಲಿ 8 ಲಕ್ಷ ವಿದ್ಯಾರ್ಥಿಗಳು ಎಸ್ ಎಸ್‌ಎಲ್ ಸಿ ಪರೀಕ್ಷೆ-01 ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಅಂಕಗಳ ಆಧಾರದ ಮೇಲೆ ಯಾವ ಕಾಲೆಜ್ ಸೇರಿಸಬೇಕು. ಯಾವ ಕೋರ್ಸ್ ಆಯ್ಕೆ ಮಾಡಿದರೆ ಉತ್ತಮ ಎಂಬ ಆಲೋಚನೆಯಲ್ಲಿ ಪಾಲಕರಿದ್ದಾರೆ.
ಹಾಗಿದ್ರೆ ಈ ವರ್ಷದ ಎಸ್ಎಸ್‌ಎಲ್‌ಸಿ ಪರೀಕ್ಷೆ-1 ರಿಸಲ್ಟ್ ಯಾವಾಗ? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಲಿಯು ಏಪ್ರಿಲ್ 15 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವನ್ನು ಆರಂಭಿಸಿದ್ದು, ಈ ಪರೀಕ್ಷೆಯ ರಿಸಲ್ಟ್ ಅನ್ನು ಮೇ 08, 2024 ರಂದು ಪ್ರಕಟಿಸಲಾಗುವುದು ಎಂದು ಅಧಿಕೃತ ಮೂಲಗಳ ಪ್ರಕಾರ ಮಾಹಿತಿ ತಿಳಿದಿದೆ. ಮುಂದುವರೆದು, ಒಂದು ವೇಳೆ ರಿಸಲ್ಟ್ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವ ಕಾರ್ಯದಲ್ಲಿ ವಿಳಂಬವಾದಲ್ಲಿ ಒಂದೆರಡು ದಿನಗಳು ವ್ಯತ್ಯಾಸವಾಗಬಹುದು ಅಷ್ಟೆ. ಒಂದು ವೇಳೆ ಅದಕ್ಕೂ ಮೊದಲು ಸಾಧ್ಯವಾದಲ್ಲಿ ಫಲಿತಾಂಶ ಬಿಡುಗಡೆ ಆಗಲಿದೆ ಎಂದು ತಿಳಿದು ಬಂದಿದೆ. .
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದರೆ ಮುಂದೇನು?
ವಿದ್ಯಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ. ಈ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು 3 ಬಾರಿ ಬರೆಯಬಹುದು. ಈ ಹಿಂದೆ ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಸಾಲಿನಿಂದ ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. 3 ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ. ಆದ್ದರಿಂದ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದರೆ / ಕಡಿಮೆ ಅಂಕಗಳು ಬಂದರೆ ಪರೀಕ್ಷೆ-2 ತೆಗೆದುಕೊಳ್ಳಬಹುದು. ಪರೀಕ್ಷೆ-2 ಅನುತ್ತೀರ್ಣರಾದರೆ / ಕಡಿಮೆ ಅಂಕ ಬಂದರೆ ಪರೀಕ್ಷೆ-3 ತೆಗೆದುಕೊಳ್ಳಬಹುದು. ಇದರಲ್ಲಿ ಯಾವುದೇ ಪರೀಕ್ಷೆ ಪೂರಕ ಪರೀಕ್ಷೆ ಆಗಿರುವುದಿಲ್ಲ. ಅಂಕಪಟ್ಟಿಯಲ್ಲಿ ಫ್ರೆಶ್ ಸ್ಟೂಡೆಂಟ್ ಎಂದೇ ನಮೂದು ಆಗುತ್ತದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಚೆಕ್ ಮಾಡಲು ವೆಬ್ ವಿಳಾಸಗಳು
https://kseab.karnataka.gov.in / https://karresults.nic.in/ https://sslc.karnataka.gov.in.