ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ರಂಭಾಪುರಿ ಶ್ರೀಗಳು ಆಗ್ರಹಿಸಿದ್ದಾರೆ.
ಭಾನುವಾರ ಇಲ್ಲಿಯ ಬಿಡನಾಳದಲ್ಲಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಅವರು,
ಮಗಳ ಕಳೆದುಕೊಂಡ ನೋವು ದೊಡ್ಡದು, ಇಂತಹ ಸ್ಥಿತಿ ಯಾರಿಗೂ ಬಾರದಿರಲಿ. ಸರ್ಕಾರ ಈ ಪ್ರಕರಣ ಸಿಐಡಿಗೆ ವಹಿಸುವ ಬದಲು ಸಿಬಿಐಗೆ ನೀಡಲಿ. ಹಿರೇಮಠ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.