ಕಲಘಟಗಿಯಲ್ಲಿ ಬೃಹತ್ ಜಾಗೃತಿ ಜಾಥಾ ನಾಳೆ
ಕಲಘಟಗಿ;ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಅ.7ರ ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ಗಾಂಧೀ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಗಾಂಧಿಸ್ಕೃತಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಜಾಥಾ ಹಾಗೂ ವ್ಯಸನಮುಕ್ತ ಸಾಧಕರ ಸಮಾವೇಶದ ವೇದಿಕೆ ಕಾರ್ಯಕ್ರಮ ಜರುಗಲಿದೆ.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಧಾರವಾಡ ಜಿಲ್ಲೆಯ ಅಖಿಲ ಕರ್ನಾಟಕ ಜಿಲ್ಲಾ ಜ ನಜಾಗೃತಿ ವೇದಿಕೆ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳ ಕಾರ್ಯ ಕ್ಷೇತ್ರದ ಎಲ್ಲ ಸಿಬ್ಬಂದಿಗಳು, ಒಕ್ಕೂಟ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ಕಾರ್ಯಕ್ರಮ ಜರುಗಲಿದೆ.
ಬೆಳಿಗ್ಗೆ ೧೦ ಘಂಟೆಗೆ ಪಟ್ಟಣದ ಯುವಶಕ್ತಿ ಸರ್ಕಲ್‌ನಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಗ್ರಹಿಸಲು ಆಯೋಜಿಸಿದ್ದ ಬೃಹತ್ ಜಾಥಾಕ್ಕೆ ಹಿ ರಿಯ ನ್ಯಾಯಾಧೀಶ ರವೀಂದ್ರ ಹೊನೋಲೆ ಅವರು ಅನೇಕ ಗಣ್ಯರಿಂದೊಡಗೂಡಿ ಚಾಲನೆ ನೀಡಲಿದ್ದಾರೆ. ಜಾಥಾ ಬಾಲಮಾರುತಿ ಮಂದಿರದ ಮುಖೇನ ರಾಷ್ಟ್ರೀಯ ಹೆದ್ದಾರಿಗುಂಟ ಎಪಿಎಂಸಿ ಎದುರಿಗೆ ಬೆಂಡಿಗೇರಿ ಓಣಿ ಮಾರ್ಗವಾಗಿ ಚೌತಮನಿಕಟ್ಟೆಯಿಂದ ಬಸವೇಶ್ವರ ಕಲ್ಯಾಣ ಮಂಟಪ ತಲುಪಲಿದೆ.
ನಂತರ ಜರುಗಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಗಾಂಧಿ ಸ್ಮೃತಿ ವಿಚಾರ ಸಂಕಿರಣ ಮತ್ತು ಜಿಲ್ಲಾ ಮಟ್ಟದ ವ್ಯಸನಮುಕ್ತ ಸಾಧಕರ ಸಮಾವೇಶದ ದೀ ಪ ಪ್ರಜ್ವಲನೆಯನ್ನು ಕಾರ್ಮಿಕ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ನೆರವೇರಿಸಲಿದ್ದು, ಸ್ಥಳೀಯ ಹನ್ನೆರಡುಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಅಧ್ಯಕ್ಷ ಸಂತೋಷ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ದಯಾಶೀಲ, ದಿವಾಣಿ ನ್ಯಾಯಾಧೀಶ ಗಣೇಶ ಎನ್., ಪೊಲೀಸ ಇನೆಸ್ಪೆಕ್ಟರ್ ಶ್ರೀಶೈಲ್ ಕೌಜಲಗಿ, ಪ.ಪಂ. ಅಧ್ಯಕ್ಷೆ ಶಿಲ್ಪಾ ಪಾಲ್ಕರ, ಜ.ಜಾ.ವೇದಿಕೆ ಉಪಾಧ್ಯಕ್ಷ ಪ್ರಭಾಕರ ನಾಯಕ, ಜಿಲ್ಲಾ ನಿರ್ದೇಶಕ ಪ್ರದೀಪ ಶೆಟ್ಟಿ, ನಿವೃತ್ತ ಪತ್ರಾಂಕಿತ ಅಧಿಕಾರಿ ಎಂ.ಆರ್.ತೋಟಗಂಟಿ, ಬಸವೇಶ್ವರ ಕಲ್ಯಾಣ ಮಂಟಪದ ಆಡಳಿತ ಮಂಡಳಿ ಸದಸ್ಯ ಗಂಗಾಧರ ಗೌಳಿ ಮುಂತಾದವರು ಆಗಮಿಸಲಿರುವುದಾಗಿ ಕ್ಷೇತ್ರ ಯೋಜನಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.