ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವುದನ್ನು ಖಂಡಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬುಧವಾರ ನಗರದ ಹಳೇ ಹುಬ್ಬಳ್ಳಿ ಶ್ರೀ ಮಾರುತಿ ದೇವಸ್ಥಾನ ಎದುರಿಗೆ ಸೇರಿದ ಕಾರ್ಯಕರ್ತರು ಪೊಲೀಸ್ ಠಾಣೆಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ , ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ, ಜಿಲ್ಲಾ ಸಂಘಟನ ಕಾರ್ಯದರ್ಶಿ ಮಂಜು ಕಾಟಕರ, ಬಸು ದುರ್ಗದ, ಬಸವರಾಜ ಗೌಡರ, ಗುಣಧರ ದಡೋತಿ ಇದ್ದರು.