ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ವಿಜಯ ಸಾಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಂದು ನೇಹಾ ತಂದೆ ಹಾಗೂ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಬೆಳಗಾವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃನಾಣ ಹೆಬ್ಬಾಳ್ಕರ್ ಗೆಲುವು ಸಾಧಿಸಲಿ ಎಂದು ಹೇಳಿಕೆ ನೀಡಿದ್ದೇನೆ. ಅವರಷ್ಟೆ ಅಲ್ಲ ರಾಜ್ಯದ ಎಲ್ಲ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿ ಎಂಬುದು ನನ್ನ ಇಚ್ಚೆಯಾಗಿದೆ ಎಂದರು.
ನೇಹಾ ತಂದೆಯಾಗಿ ನನ್ನ ಹೋರಾಟ ಪಕ್ಷಾತೀತವಾಗಿದ್ದು, ಈ ಹೋರಾಟಕ್ಕೂ ಮತ್ತು ನನ್ನ ರಾಜಕೀಯ ಹೇಳಿಕೆಗಳಿಗೂ ಯಾವುದೇ ಸಂಬಂಧವಿಲ್ಲ, ನನ್ನ ಮಗಳ ಸಾವಿಗೆ ನ್ಯಾಯ ಸಿಗುವವರೆಗೂ ನನ್ನ ಹೋರಾಟ ನಿರಂತರಾವಾಗಿರುತ್ತದೆ ಎಂದರು.