ಕೊಲೆ ಪ್ರಕರಣ: ಆರೋಪಿಗಳ ಹೆಡೆಮುರಿ ಕಟ್ಟಿದ ಗ್ರಾಮೀಣ ಪೋಲಿಸರು
ಹುಬ್ಬಳ್ಳಿ: ಕುಂದಗೋಳ ಮತಕ್ಷೇತ್ರದ ಹಳ್ಯಾಳ ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೋಲಿಸರು ಕಾರ್ಯಾಚರಣೆ ನಡೆಸಿ 24 ಗಂಟೆ ಒಳಗಾಗಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಾನುವಾರ ಶರೀಫ್’ಸಾಬ ಎಂಬಾತನನ್ನು ಗ್ರಾಮದ ಸರ್ಕಾರಿ ಶಾಲೆಯ ನಿರ್ಮಾಣ ಹಂತದ ಕೊಠಡಿಯಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಬಳಿಕ ಗ್ರಾಮೀಣ ಪೋಲಿಸರು ಕಾರ್ಯಾಚರಣೆ ನಡೆಸಿ ಶಶಿಧರ, ನಾಗರಾಜ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಭಾನುವಾರ ರಾತ್ರಿ 9.30 ರ ಸುಮಾರಿಗೆ ಮುಂಡಗೋಡದ ಮೂಲದ ಹಳ್ಯಾಳ ಗ್ರಾಮದ ನಿವಾಸಿಯಾಗಿದ್ದ ಶರೀಫ್’ಸಾಬ ಎಂಬಾತನನ್ನು ಗ್ರಾಮದ ಸರ್ಕಾರಿ ಶಾಲೆಯ ನಿರ್ಮಾಣ ಹಂತದ ಕೊಠಡಿಯಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಬಳಿಕ ಈ ವಿಷಯವನ್ನು ಗ್ರಾಮಸ್ಥರು ಪೋಲಿಸರಿಗೆ ತಿಳಿಸಿದರು.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಇನ್ಸ್ಪೆಕ್ಟರ್ ಮುರಗೇಶ ಚನ್ನನವರ ಹಾಗೂ ಮತ್ತವರ ತಂಡ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದರು.
ಬಳಿಕ ಇನ್ಸ್ಪೆಕ್ಟರ್ ಚನ್ನನವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಚಿನ್ ಅಲಮೇಕರ್ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೊಲೆ ಗೈದಿದ್ದ ಆರೋಪಿಗಳಾದ ಹುಬ್ಬಳ್ಳಿಯ ಯಲ್ಲಾಪುರ ಓಣಿಯ ನಿವಾಸಿ ಶಶಿಧರ ಚೆನ್ನುಜಿ ಅಲಿಯಾಸ್ ಶೇಶ್ಯಾ (22) ಹಾಗೂ ಹಳ್ಯಾಳ ಗ್ರಾಮದ ನಾಗರಾಜ ಸೋಮರಡ್ಡಿ ಎಂಬಾತನನ್ನು ಬಂಧಿಸಿದ್ದು, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೋಲಿಸರ ಮುಂದೆ ತಪ್ಪೋಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆಯ ಆರೋಪಿಯಾಗಿರುವ ಶಶಿಧರನ ಮೇಲೆ ಕೊಲೆ ಯತ್ನ ಹಾಗೂ ಕಳ್ಳತನದ ಪ್ರಕರಣಗಳಿವೆ ಎಂಬ ಮಾಹಿತಿಯೂ ಲಭ್ಯವಾಗಿದೆ.