Ad imageAd image

ಜನಪರ ಸರ್ಕಾರ ನಮ್ಮದು; ಸಲೀಂ ಅಹ್ಮದ್

Hubballi Dhwani
ಜನಪರ ಸರ್ಕಾರ ನಮ್ಮದು; ಸಲೀಂ ಅಹ್ಮದ್
WhatsApp Group Join Now
Telegram Group Join Now

ಜನಪರ ಸರ್ಕಾರ ನಮ್ಮದು; ಸಲೀಂ ಅಹ್ಮದ

ಹುಬ್ಬಳ್ಳಿ ; ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲ ವಾತಾವರಣ ಸೃಷ್ಟಿಯಾಗಿದೆ. ನಮ್ಮದು ಜನಪರ ಸರ್ಕಾರ ಎಂದು ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹೇಳಿದರು.

ಇಂದು ಸರ್ಕ್ಯೂಟ್ ಹೌಸ್‌‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ ಅನ್ನಭಾಗ್ಯ, ಶಕ್ತಿ ಯೋಜನೆ, ಯುವ ನಿಧಿ, ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಜಾರಿಗೆ ತರಲಾಗಿದೆ. ಸರ್ಕಾರ ಜನರಿಗೆ ಯಾವುದೇ ರೀತಿಯಲ್ಲಿ ಹೊರೆ ಮಾಡಿಲ್ಲ. ಜನರ ಹಿತವನ್ನು ಸರ್ಕಾರ ಕಾಪಾಡುತ್ತಿದೆ ಎಂದು ತಿಳಿಸಿದರು.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಸದಾನಂದ ಡಂಗನವರ, ಮುಖಂಡರು ಪತ್ರಿಕಾಗೋಷ್ಠಿಯಲ್ಲಿದ್ದರು.
******

WhatsApp Group Join Now
Telegram Group Join Now
Share This Article
error: Content is protected !!