ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವು ಮೇ 9ರ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ 09.05.2024 ರಂದು ಬೆಳಗ್ಗೆ 10:30ಕ್ಕೆ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದೆ.
ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮೇ 9ರ ಬೆಳಗ್ಗೆ 10:30ರ ನಂತರ ವೀಕ್ಷಿಸಬಹುದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆ ತಡವಾಗಿದೆ.
ಫಲಿತಾಂಶ ಇಲ್ಲಿ ನೋಡಬಹುದು…
ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ನೋಂದಣಿ ಸಂಖ್ಯೆ (ರಿಜಿಸ್ಟರ್ ನಂಬರ್) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಫಲಿತಾಂಶ ವೀಕ್ಷಿಸಲು kseab.karnataka.gov.in ಸೈಟಿಗೆ ಭೇಟಿ ನೀಡಬಹುದು. ಅಲ್ಲದೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.
ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಿ
ಮುಖಪುಟದಲ್ಲಿ ಕಾಣುವ ಎಸ್ಎಸ್ಎಲ್‌ಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಲಾಗಿನ್ ಪುಟದಲ್ಲಿ ಕೇಳುವ ಪರೀಕ್ಷಾ ನೋಂದಣಿ ಸಂಖ್ಯೆ ಹಾಗೂ ಹೆಸರು ಕೇಳಲಾದ ಮಾಹಿತಿ ನಮೂದಿಸಿ
ಹೊಸ ಪುಟದಲ್ಲಿ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ
ಡೌನ್ ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ. ಈ ಕುರಿತು ನಿಮ್ಮ ಹುಬ್ಬಳ್ಳಿ ಧ್ವನಿ ವೆಬ್ ಸೈಟ್ ನಿಖರ ಮಾಹಿತಿ ನೀಡಿತ್ತು.