ಕಲಬುರಗಿ: ಕಲಬುರಗಿ ಜಿಲ್ಲೆಯ ಹುಮನಾಬಾದ್ ರಸ್ತೆಯ ಎಲೆಕ್ಟಿಕ್ ಬೈಕ್ ಶೋ ರೂಂನಲ್ಲಿ ಬೆಂಕಿ ಹತ್ತಿ ಉರಿದಿದ್ದು, ಎಲೆಕ್ಟಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್‌ಗೆ ಸಿಟ್ಟಿನಿಂದ ಯುವಕ ಬೆಂಕಿ ಹಚ್ಚಿದ್ದಾನೆ ಎಂದು ಹೇಳಲಾಗುತ್ತಿದೆ.
ನಿನ್ನೆ ಬೆಳಗ್ಗೆ ಶೋ ರೂಂ ಬೆಂಕಿ ತಗುಲಿತ್ತು. ಆರಂಭದಲ್ಲಿ ಎಲ್ಲರೂ ಶಾರ್ಟ್ ಸಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದುಕೊಂಡಿದ್ದರು. ಆದರೆ ಪೊಲೀಸರು ಇದು ಕುಕೃತ್ಯ ಎಂದು ತನಿಖೆ ವೇಳೆ ಪತ್ತೆಹಚ್ಚಿರುವುದಾಗಿ ತಿಳಿದುಬಂದಿದೆ.