- ಕಲಘಟಗಿ: ಕೆರೆ ಹಾಗೂ ಸ್ಮಶಾನ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳು ಮುಂದಾದ ಹಿನ್ನೆಲೆಯಲ್ಲಿ ಸೂಳಿಕಟ್ಟಿ ಗ್ರಾಮಸ್ಥರು ಮತದಾನ ಮಾಡಿದರು.
ಮೂಲ ಸೌಕರ್ಯಗಳ ಕೊರತೆ ಹಿನ್ನೆಲೆಯಲ್ಲಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಹಶೀಲ್ದಾರ್ ಹಾಗೂ ಜಿಲ್ಲಾಡಳಿತಕ್ಕೆ ತಿಳಿಸಿದ್ದರು. ಕೂಡಲೇ ಸ್ಪಂದಿಸಿದ ಅಕಾರಿಗಳು ಕೆರೆ ಒತ್ತುವರಿ ತೆರವುಗೊಳಿಸಿ ನರೇಗಾ ಮೂಲಕ ಹೂಳೆತ್ತಲು ಕ್ರಮ ಕೈಗೊಂಡಿದ್ದಾರೆ. ಇದಲ್ಲದೇ ಸ್ಮಶಾನ ಒತ್ತುವರಿಯನ್ನು ತೆರವುಗೊಳಿಸುವ ಭರವಸೆ ನೀಡಿದ್ದಾರೆ. ಅಧಿಕಾರಿಗಳ ಭರವಸೆ ನಂತರ ಗ್ರಾಮಸ್ಥರು ಮತದಾನ ಮಾಡಿದ್ದಾರೆ.
ಗ್ರಾಮಸ್ಥರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಚುನಾವಣಾ
ಅಧಿಕಾರಿಗಳಾದ ಸಿದ್ದು ಹುಲ್ಲೊಳ್ಳಿ, ತಹಶೀಲ್ದಾರ ಯಲಪ್ಪಾ ಗೊಣ್ಣೆನ್ನವರ, ಪೊಲೀಸ್ ಇನ್ಸ್ಪೆಕ್ಟರ್ ಶಿವಾನಂದ್ ಕೌಜಲಗಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಯಲ್ಲಾರಿ ಸೇರಿದಂತೆ ಇತರೆ
ಅಧಿಕಾರಿಗಳು ಮತದಾನ ಮಾಡಿಸಲು ಗ್ರಾಮಸ್ಥರ ಮನವೊಲಿಸಿದ್ದಾರೆ ಎಂದು ರೈತ ಮುಖಂಡ ಪರಶುರಾಮ ಎತ್ತಿನಗುಡ್ಡ ತಿಳಿಸಿದ್ದಾರೆ.
ಕೆರೆ, ಸ್ಮಶಾನ ಒತ್ತುವರಿ ತೆರವಿನ ಭರವಸೆ ; ಮತದಾನ ಮಾಡಿದ ಸೂಳಿಕಟ್ಟಿ ಜನತೆ
