Ad imageAd image

ಆಕಾಶ ಕೊಲೆ ಪ್ರಕರಣ: ಕಾರಣ ಇನ್ನೂ ನಿಗೂಢ!

Hubballi Dhwani
ಆಕಾಶ ಕೊಲೆ ಪ್ರಕರಣ: ಕಾರಣ ಇನ್ನೂ ನಿಗೂಢ!
WhatsApp Group Join Now
Telegram Group Join Now

ಆಕಾಶ ಕೊಲೆ ಪ್ರಕರಣ: ಕಾರಣ ಇನ್ನೂ ನಿಗೂಢ!

ಭಾನುವಾರ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯ ಕ್ರಿಯೆ I ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಜನರ ಬಂಧನ । ಇನ್ನೂ ನಾಲ್ವರ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು I ನ್ಯಾಯ ಕೊಡಿಸಲು ಆಟೋ ಚಾಲಕರ ಆಗ್ರಹ

ಹುಬ್ಬಳ್ಳಿ; ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರ ಆಕಾಶ ಮಠಪತಿ ಸಾವಿನ ಪ್ರಕರಣ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ. ಈಗಾಗಲೇ 12 ಜನರಲ್ಲಿ 8 ಜನರನ್ನು ಪೊಲೀಸರು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇಲ್ಲಿನ ಲೋಹಿಯಾ ನಗರದಲ್ಲಿ ಶನಿವಾರ ಸಂಜೆ ಆಕಾಶನ ಶವ ಪತ್ತೆಯಾಗಿತ್ತು. ಕುಟುಂಬದವರ ಗಮನಕ್ಕೆ ಬರುತ್ತಿದ್ದಂತೆ ಶವವನ್ನು ಕಿಮ್ಸ್‌ಗೆ ಸಾಗಿಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಆಕಾಶನ ತಂದೆ ಶೇಖರಯ್ಯ ಮಠಪತಿ ಅವರಿಂದ, ಆಕಾಶನ ಪತ್ನಿ ಕಾವ್ಯ, ಅತ್ತೆ ಶ್ರೀದೇವಿ, ಮಾವ ಮೋಹನ ನಾಯಕ್ ಹಾಗೂ ಅಳಿಯ ಭರತ ನಾಯಕ್ ಸೇರಿದಂತೆ 12 ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.

8 ಜನರ ಬಂಧನ: ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹು-ಧಾ ಮಹಾನಗರ ಪೊಲೀಸ್ ಆಯುಕ್ತ ರೇಣುಕಾ ಸುಕುಮಾ‌ರ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಜನರಲ್ಲಿ ಅರ್ಜುನ ಮಳಗಿ, ಸಂಜು ಕೊಪ್ಪದ, ರಾಹುಲ್ ಕಾಂಬ್ಳೆ, ವಿನಾಯಕ ತಾಳಿಕೋಟೆ, ಮನೋಜ, ಚಮಕ್ ಅಲಿಯಾಸ್ ಮೌನೇಶ, ಮಹೇಶ ಹಾಗೂ ಕಾರ್ತಿಕನನ್ನು ಬಂಧಿಸಲಾಗಿದೆ. ಇನ್ನುಳಿದ ಆಕಾಶನ ಪತ್ನಿ, ಅತ್ತೆ, ಮಾವ ಹಾಗೂ ಅಳಿಯನ ಬಂಧನಕ್ಕೆ ಬಲೆ‌ಬಿಸಲಾಗಿದೆ.

ಕುಡಿಯುವವಿಚಾರದಲ್ಲಿ ಕಪಾಳಕ್ಕೆ ಹೊಡೆದಿದ್ದರು ಎನ್ನುವ ಕಾರಣಕ್ಕೆ ಗಲಾಟೆ ಆರಂಭವಾಗಿದೆ. ಈ ವೇಳೆ ಆರೋಪಿ ರಾಹುಲ್ ಕಾಂಬ್ಳೆ ಆಕಾಶನಿಗೆ ಹೊಡೆದಿದ್ದಾನೆ. ಹೀಗಾಗಿ ಕೆಳಗೆ ಬಿದ್ದು ಆಕಾಶ ಮೃತಪಟ್ಟಿದ್ದಾನೆ. ಕುಡಿಯುವ ವಿಚಾರಕ್ಕೆ ಗಲಾಟೆ ಆಗಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು బందిది.‌ಎಫ್ ಎಸ್ ಎಲ್ ವರದಿ‌ ನಂತರ ತನಿಖೆ ಮಾಡಲಾಗುವುದು ಎಂದು ತಿಳಿಸಿದರು.

ಕಾಲಿಗೆ ಬಿದ್ದ ಆಟೋರಿಕ್ಷಾ ಚಾಲಕ: ಕಿಮ್ಸ್‌ನ ಶವಾಗಾರದ ಮುಂದೆ ಜಮಾವಣೆಗೊಂಡ ನೂರಾರು ಆಟೋ ಚಾಲಕರು ಆಕಾಶನ ಸಾವಿಗೆ ನ್ಯಾಯ ಕೊಡಿಸುವಂತೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಆಟೋರಿಕ್ಷಾ ಚಾಲಕ ಹನುಮಂತಪ್ಪ ಪವಾಡೆ ಮಾತನಾಡಿ, ಆಟೋ ಚಾಲಕರ ಸಂಘದ ಅಧ್ಯಕ್ಷನ ಮಗನದ್ದೇ ಈ ಪರಿಸ್ಥಿತಿ ಆದರೆ ನಮ್ಮಂಥವರ ಪರಿಸ್ಥಿತಿ ಏನಾಗಬೇಕು? ಕೂಡಲೇ ಆಕಾಶ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಹಳೇ ಹುಬ್ಬಳ್ಳಿ ಠಾಣೆ ಪಿಐ ಸುರೇಶ ಯಳ್ಳೂರ ಅವರ ಕಾಲಿಗೆ ಬಿದ್ದು ಅಂಗಲಾಚಿದರು. ನಂತರ ಆಕಾಶ ಮಠಪತಿ ಕೊಲೆ ಖಂಡಿಸಿ ಆಟೋ ಚಾಲಕರು ಕಿಮ್ಸ್ ಶವಾಗಾರದ ಎದುರು ಪ್ರತಿಭಟನೆ ನಡೆಸಿದರು.

WhatsApp Group Join Now
Telegram Group Join Now
Share This Article
error: Content is protected !!