ಹುಬ್ಬಳ್ಳಿಯ ವಾರ್ಡ್ ನಂ 68ರಲ್ಲಿ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರು ದಂಪತಿ ಸಮೇತ ಮತದಾನ ಮಾಡಿದರು. ಮತದಾನವನ್ನು ಹಬ್ಬದಂತೆ ಸಂಭ್ರಮಿಸಿ. ದೇಶದ ಒಳಿತಿಗಾಗಿ, ಸದೃಢ ಭಾರತಕ್ಕಾಗಿ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಯಾರೂ ಸಹ ನಿರ್ಲಕ್ಷ್ಯ ಮಾಡದೇ ಆದಷ್ಟು ಬೇಗ ಮತಗಟ್ಟೆಗೆ ಹೋಗಿ ತಮ್ಮ ಹಕ್ಕು ಚಲಾಯಿಸಿ. ದೇಶದ ಸರ್ವಾಂಗೀಣ ಪ್ರಗತಿಗೆ ತಮ್ಮದೇ ಮತದಾನದ ಮೂಲಕ ತಮ್ಮದೇ ಆದ ಕೊಡುಗೆ ನೀಡಿ. ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸೋಣ ಎಂದು ತಿಳಿಸಿದರು.