ಹುಬ್ಬಳ್ಳಿ; ಎಸ್.ಎಸ್.ಕೆ. ಸಹಕಾರ ಬ್ಯಾಂಕನ ಅಧ್ಯಕ್ಷ ವಿಠ್ಠಲ ಪಿ. ಲದವಾ ಅವರು ಕುಟುಂಬ ಸಮೇತ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.
ಕುಟುಂಬದ 12 ಜನರು ಮತದಾನ ಮಾಡಿದರು. ಕಮರಿಪೇಟೆ ಕನ್ನಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ನಂತರ ಮಾತನಾಡಿದ ಅವರು, ಸಮಾಜದಲ್ಲಿ ಮತದಾನ ಮಾಡುವವರ ಸಂಖ್ಯೆ ಇಳಿಮುಖವಾಗುತ್ತಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.